ಮನೆಬಾಗಿಲಿಗೇ ಇ-ಖಾತೆ: ಶಾಸಕ ಧೀರಜ್ದೊಡ್ಡಬಳ್ಳಾಪುರ: ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.