ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.
ಹಳ್ಳಿಗಳ ಸಬಲೀಕರಣಕ್ಕೆ ಜಾರಿಗೆ ತಂದಿರುವ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹತ್ತು ಹಲವು ಪ್ರಗತಿಪರ ಯೋಜನೆ, ಕಾರ್ಯಕ್ರಮ ಜಾರಿಗೆ ತರುತ್ತಿರುವ ಕರ್ನಾಟಕ ಪ್ರಸ್ತುತ ಇಡೀ ದೇಶದಲ್ಲಿ ಪಂಚಾಯತ್‌ರಾಜ್ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಸ್ಥಳೀಯ ಸಂಸ್ಥೆಗಳಿಂದ ಸಂಸತ್ ಚುನಾವಣೆವರೆಗೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅವರು ಬೇಕೇ ಬೇಕು
ಗೋದಾವರಿ, ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆ ಅಗತ್ಯವಾಗಿದ್ದು, ನೀರಾವರಿ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಯೋಜನೆಗೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಯೋಜನೆಯನ್ನು ಕೊಲ್ಲುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿದ್ದ ಬುಡಕಟ್ಟು ಸಮುದಾಯದವರಿಗೆ ಪುನರ್ವಸತಿ ಕಲ್ಪಿಸಲು ನಿಗದಿ ಮಾಡಲಾಗಿರುವ ಭೂಮಿಯಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುವ ಜತೆಗೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುವ ಆತಂಕ ಎದುರಾಗಿದೆ.