3ನೇ ಹಂತದ ಶುದ್ಧೀಕರಣ ಘಟಕ ನಿರ್ಮಾಣ ಮರೀಚಿಕೆವಿಧಾನಸಭೆಯಲ್ಲಿ ಸೋಮವಾರ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, 3ನೇ ಹಂತದ ನೀರು ಶುದ್ಧೀಕರಣ ಘಟಕ ನಿರ್ಮಾಣ ಕ್ರಿಯಾಯೋಜನೆ, ಟೆಂಡರ್ ಇಲಾಖೆ ಮುಂದೆ ಬಂದಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುವ ಎಸ್‌ಟಿಪಿ ಘಟಕ ಬದಲಾಯಿಸಲು ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್, ಕ್ರಿಯಾ ಯೋಜನೆ ಕುರಿತು ಶಾಸಕರು ಪ್ರಶ್ನಿಸಿದ್ದರು.