ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್ ಮಿನಿಟ್ ಅಪಾಲಜಿ’ ಎಂಬ ಇಂಗ್ಲಿಷ್ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.
ನಾನು ಕುಂಭಮೇಳದಲ್ಲಿ ಭಾಗವಹಿಸುವ ಕುರಿತು ಟೀಕೆ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಭಾಗಹಿಸುತ್ತಿರುವುದನ್ನು ಪ್ರಶ್ನಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಅಪಾರ ಪ್ರಮಾಣದ ರಾಗಿ ಬೆಳೆ ಹಾನಿಗೊಳಗಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯನ್ನು ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಪಡೆದುಕೊಳ್ಳಲು ನಾಡಿನ ರೈತರಿಗೆ ಸಾಧ್ಯವಾಗುತ್ತಿಲ್ಲ.
ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ(ಯುಜಿಸಿ) ಕರಡು ನಿಯಮಾವಳಿ-2025ರ ಮೂಲಕ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಕೆಲಸ ನಡೆದಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಈ ಕರಡನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ರೈಲುಗಳ ಡಿಕ್ಕಿ ತಪ್ಪಿಸಲು ‘ಕಚವ’ ಸಿಸ್ಟಂ ಅಳವಡಿಕೆಗೆ ಸಿದ್ಧತೆ ನಡೆಯುತ್ತಿದೆ. ವಲಯದ ವ್ಯಾಪ್ತಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು 3 ತಿಂಗಳಲ್ಲಿ ಕೆಲಸ ಶುರುವಾಗಲಿದೆ.
ನಗರದಲ್ಲಿ ಕಾವೇರಿ ನೀರಿನ ಏರಿಕೆಗೆ ಸಂಬಂಧಿಸಿದಂತೆ ಮೂರು ಮಾದರಿ ದರ ಪರಿಷ್ಕರಣೆಯ ಪಟ್ಟಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೀಘ್ರದಲ್ಲಿ ದರ ಏರಿಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ.
ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ಯಲಹಂಕ ವಾಯು ಸೇನಾ ನೆಲೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.
ಬಿಎಂಟಿಸಿ ಬಸ್ ಪ್ರಯಾಣಿಕರು ಆನ್‌ಲೈನ್ ಪೇಮೆಂಟ್ ಆ್ಯಪ್‌ಗಳ ಮೂಲಕ ಟಿಕೆಟ್ ದರ ಪಾವತಿಸುವ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಫೆ.3ರಂದು ಒಂದೇ ದಿನ ₹1.03 ಕೋಟಿಗೆ ತಲುಪಿದೆ.
ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್‌ಗಳು, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಏಜೆಂಟ್‌ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.