ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಸುಮಾರು 60 ಲಕ್ಷ ಮಕ್ಕಳಿಗೆ ಇನ್ಮುಂದೆ ಭಾನುವಾರ ರಜಾದಿನ ಹೊರತುಪಡಿಸಿ ವಾರದ ಉಳಿದ ಆರೂ ದಿನ ಬೇಯಿಸಿದ ಮೊಟ್ಟೆ ನೀಡಲು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನೊಂದಿಗೆ ಜು.21ರಂದು ಶಿಕ್ಷಣ ಇಲಾಖೆಯು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ.
ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಗುಡ್ಡ ಕುಸಿತ ಕೂಡ ಮುಂದುವರಿದಿದೆ. ಗುಡ್ಡ ಕುಸಿತದಿಂದಾಗಿ ಕರ್ನಾಟಕ- ಗೋವಾ, ಮಂಗಳೂರು-ಬೆಂಗಳೂರು, ಮಡಿಕೇರಿ-ಮಂಗಳೂರು ಸೇರಿ 9ಕ್ಕೂ ಹೆಚ್ಚು ಹೆದ್ದಾರಿಗಳು ಬಂದ್ ಆಗಿದೆ. ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.