ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿಯವರು ಖರೀದಿ ಮಾಡಿದ ಭೂಮಿಗೆ ಸಂಬಂಧಿಸಿದ ದಾಖಲೆಗಳು ನಕಲಿಯಾಗಿದ್ದು, ಸುಳ್ಳು ದಾಖಲೆಗಳನ್ನು ಇಟ್ಟುಕೊಂಡು ಅವರು ಭೂಮಿ ಖರೀದಿ ಮಾಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆನ್ನುಹುರಿ ಊತದ ಹಿನ್ನೆಲೆಯಲ್ಲಿ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರ ರಕ್ತದೊತ್ತಡದಲ್ಲಿ ಏರಿಳಿತವಾಗುತ್ತಿದೆ. ಇದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ವೈದ್ಯರು ಇನ್ನೂ ನಿರ್ಧರಿಸಿಲ್ಲ ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಹೈಕೋರ್ಟ್‌ಗೆ ಗುರುವಾರ ಮಾಹಿತಿ ನೀಡಿದರು.
ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ.1ರಿಂದ ಅನ್ವಯವಾಗುವಂತೆ ಶೇ. 8.50 ರಿಂದ ಶೇ.10.75ಕ್ಕೆ ಹೆಚ್ಚಿಸಲಾಗಿದೆ.
ರಾಜ್ಯದ ಕರಾವಳಿ ಪ್ರದೇಶಕ್ಕೆ ಬರುವ ಕಡಲಾಮೆಗಳ ಜೀವನ ಶೈಲಿ ಅಧ್ಯಯನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಕೆಲ ಕಡಲಾಮೆಗಳಲ್ಲಿ ಮೈಕ್ರೋ ಚಿಪ್ ಅಳವಡಿಕೆ ಹಾಗೂ ಹೊನ್ನಾವರ ಸಮೀಪದ ಹಿರೇಗುತ್ತಿಯಲ್ಲಿ ರಾಜ್ಯಕ್ಕಾಗಮಿಸುವ ಕಡಲಾಮೆಗಳ ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರ ನಿರ್ಮಿಸಲು ಯೋಜನೆ ರೂಪಿಸಿದೆ.