ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ಮಾಡಿದೆ.
ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಎಸ್ಎಂವಿಟಿ ಬೆಂಗಳೂರು ನಡುವೆ 13 ಟ್ರಿಪ್ಗಳ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.
‘ಹೋಟೆಲ್ಗಳಲ್ಲಿ ತಿಂಡಿ, ತಿನಿಸು, ಊಟದ ಬಿಲ್ಗಳ ಮೇಲಿನ ಸೇವಾ ಶುಲ್ಕ (ಸರ್ವೀಸ್ ಚಾರ್ಜ್) ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ. ಅದು ಸ್ವಯಂಪ್ರೇರಿತ. ಹೋಟೆಲ್ಗಳು ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಮಲ ಮಗಳು ಹಾಗೂ ನಟಿ ರನ್ಯಾರಾವ್ ಶಿಷ್ಟಾಚಾರ ಸೌಲಭ್ಯ(ಪ್ರೋಟೋಕಾಲ್) ಪಡೆದಿರುವುದು ಡಿಜಿಪಿ ರಾಮಚಂದ್ರರಾವ್ ಅವರ ಅರಿವಿಗಿತ್ತು.
ಈಗಾಗಲೇ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ವೇಳೆ ಹೊಸ ಶಾಕ್ ನೀಡಿದೆ. ಎಲ್ಲಾ ಮಾದರಿಯ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್ಗೆ ನಾಲ್ಕು ರು. ಹೆಚ್ಚಳ ಮಾಡಿದೆ. ಈ ದರ ಹೆಚ್ಚಳ ಏ.1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಗುರುವಾರ ಸರ್ಕಾರಕ್ಕೆ ಸಲ್ಲಿಸಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಪಕ್ಷದ 7 ಸದಸ್ಯರನ್ನು ಅನರ್ಹಗೊಳಿಸುವಂತೆ ಗುರುವಾರ ಮುಖ್ಯಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.