ನಾಗೇಂದ್ರಗೆ ಕುಣಿಕೆ ಬಿಗಿ!ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಸತತ 48 ತಾಸುಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಇಬ್ಬರ ನಿವಾಸ ಮತ್ತು ನಿಗಮದ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.