ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5 ರಿಯಾಯಿತಿ ಅವಧಿ ವಿಸ್ತರಣೆಕನ್ನಡಪ್ರಭ ವಾರ್ತೆ, ರಾಮನಗರ ನಗರ, ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ) ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿಸಿದ್ದಲ್ಲೀ ಶೇ.5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಜು.31ರವರೆಗೆ ವಿಸ್ತರಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ಅವರು ರಾಮನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.