ಬೆಂಗಳೂರು ಕೇಂದ್ರ ಭಾಗದಲ್ಲಿರುವ ಆನಂದ್‌ರಾವ್ ವೃತ್ತದ ಬಳಿ 59 ಮಹಡಿಗಳ ಬೃಹತ್ ಅವಳಿ ಗೋಪುರ ನಿರ್ಮಾಣಕ್ಕೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆಯಿದೆ.
ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ತೀವ್ರ ಬೆನ್ನು ನೋವಿಂದ ಬಳಲುತ್ತಿದ್ದು, ಬುಧವಾರ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದರು. ಮುಂದಿನ ವಾರ ವೈದ್ಯರು ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ನೆರವೇರಿಸುವ ಸಾಧ್ಯತೆ ಇದೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾ ಕುಂಭನಗರಕ್ಕೆ ಆಗಮಿಸುತ್ತಿದ್ದಾರೆ.
ಬಿಬಿಎಂಪಿಯು 2024-25ನೇ ಸಾಲಿನ ಆರ್ಥಿಕ ವರ್ಷ ಮುಗಿಯಲು ಇನ್ನೂ ಎರಡೂವರೆ ತಿಂಗಳು ಬಾಕಿ ಇರುವ ಮುನ್ನವೇ ಶೇ.83 ರಷ್ಟು ಆಸ್ತಿ ತೆರಿಗೆ ವಸೂಲಿ ಮಾಡಿದೆ.
ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮಿಕಿ ಅವರ ವಿಷಯಾಧಾರಿತ 217ನೇ ಫಲಪುಷ್ಪ ಪ್ರದರ್ಶನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಜ.16) ಆರಂಭವಾಗಲಿದ್ದು, ಹನ್ನೆರಡು ದಿನಗಳವರೆ ಅಂದರೆ 27ರವರೆಗೆ ನಡೆಯಲಿದೆ.