2025ರ ಗ್ರಾಮಿ ಪ್ರಶಸ್ತಿಗೆ ರಿಕಿ ಕೇಜ್, ವಾರಿಜಾಶ್ರೀ ವೇಣುಗೋಪಾಲ್, ಅನೌಷ್ಕಾ ಶಂಕರ್, ರಾಧಿಕಾ ವೆಕಾರಿಯಾ ಮತ್ತು ಚಂದ್ರಿಕಾ ಟಂಡನ್ ನಾಮನಿರ್ದೇಶನಗೊಂಡಿದ್ದಾರೆ. ಇವರುಗಳಲ್ಲಿ ರಿಕಿ ಕೇಜ್ ಮತ್ತು ವಾರಿಜಾ ಶ್ರೀ ಅವರು ಕನ್ನಡಿಗರು ಎಂಬುದು ವಿಶೇಷ.
ನ.20ರಂದು ರಾಜ್ಯಾದ್ಯಂತ ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದವರು ನಮ್ಮ ಒಕ್ಕೂಟದ ಸದಸ್ಯರಲ್ಲ. ಅವರಿಗೂ ನಮಗೂ ಸಂಬಂಧವಿಲ್ಲ. ಬಂದ್ ನಡೆಸುವುದು ನಿಶ್ಚಿತ ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ ಸ್ಪಷ್ಟಪಡಿಸಿದೆ.
ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.
ಕ್ವಿನ್ (ಕೆಡಬ್ಲ್ಯುಐಎನ್) ಸಿಟಿ ನಿರ್ಮಾಣಕ್ಕೆ ಆರಂಭಿಕ ಪ್ರಕ್ರಿಯೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಚಾಲನೆ ನೀಡಿದ್ದು, ಬರೋಬ್ಬರಿ 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಕ್ವಿನ್ ಸಿಟಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲು ಖಾಸಗಿ ಸಂಸ್ಥೆ ನೇಮಕಕ್ಕೆ ಮುಂದಾಗಿದೆ.
ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.