ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕೂಡಾ ಕಾರಣವಾಗಿದೆ ಎಂಬುದು ಅಚ್ಚರಿಯಾದರೂ ಸತ್ಯ ಸಂಗತಿ.
ಏಷ್ಯಾನೆಟ್ ಸುವರ್ಣ ನ್ಯೂಸ್’ ಔಟ್‌ಪುಟ್ ಎಡಿಟರ್ ಎಂ.ಸಿ.ಶೋಭಾ, ‘ಕನ್ನಡಪ್ರಭ’ದ ಮುಖ್ಯ ಉಪಸಂಪಾದಕಿ ಪ್ರಿಯಾ ಕೆರ್ವಾಶೆ ಸೇರಿದಂತೆ ಹನ್ನೆರಡು ಸಾಧಕಿಯರಿಗೆ ಇಂಟರ್‌ನ್ಯಾಷನಲ್ ವುಮೆನ್ಸ್ ಅಚೀವರ್ಸ್ ಅವಾರ್ಡ್ಸ್, ಯಂಗ್ ಅಚೀವರ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
‘ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ₹2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಪುನರ್ ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿ.ಪಿ.ಯೋಗೇಶ್ವರ್ ೯ ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ಕುಮಾರಸ್ವಾಮಿ ತಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಅವರನ್ನು ಆಚೆ ಕಳಿಸಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಳೆದ 25 ದಿನಗಳಲ್ಲಿ 100 ವರ್ಷಗಳಲ್ಲೇ 3ನೇ ಅತಿ ಹೆಚ್ಚು ದಾಖಲೆ ಪ್ರಮಾಣದ ಮಳೆಯಾಗಿದೆ. ಈ ಅತಿವೃಷ್ಟಿಯಿಂದ ಉಂಟಾಗಿರುವ ಸಾವು ಹಾಗೂ ಮನೆಗಳ ಹಾನಿಗೆ ಕಡ್ಡಾಯವಾಗಿ 48 ಗಂಟೆಗಳಲ್ಲಿ ಪರಿಹಾರ ಒದಗಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.