ಎತ್ತಿನಹೊಳೆ ಪೈಪ್‌ಲೈನ್: 3ನೇ ಹಂತದ ಶುದ್ಧೀಕರಣ ಮರೀಚಿಕೆದೊಡ್ಡಬಳ್ಳಾಪುರ: 14 ವರ್ಷಗಳ ಹಿಂದೆ ಎತ್ತಿನಹೊಳೆ ಯೋಜನೆ ಪ್ರಾರಂಭದ ದಿನಗಳಲ್ಲಿ ಹೇಳುತ್ತಿದ್ದ ಮಾತುಗಳನ್ನೇ ಈಗಲೂ ಹೇಳುತ್ತಿದ್ದೇವೆ. ಈ ಯೋಜನೆಯಿಂದ ಬಯಲುಸೀಮೆಯ ಜನರ ಕುಡಿಯುವ ನೀರಿನ ಬವಣೆ ನೀಗುವುದಿಲ್ಲ. ಆದರೆ ರಾಜಕೀಯ ಪಕ್ಷಗಳ ಬೆಂಬಲಿಗರು, ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆ ಕುರಿತಂತೆ ಜನರಿಗೆ ಸುಳ್ಳು ಹೇಳುತ್ತಲೇ ಬರುತ್ತಿದ್ದಾರೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಹೇಳಿದರು.