ಬಿಜೆಪಿಯ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ ಮತ್ತು ಮಾತನ್ನೂ ಆಡಿಲ್ಲ ಎಂದು ತಿಳಿಸಿದರು.
ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಹಾಗೂ 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.
ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.
ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ (80) ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ
ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.
ಖಾಸಗಿ ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಶಾಲಾ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸುವ ಕುತಂತ್ರ ನಡೆಸಿದರೆ ಮಾನ್ಯತೆ ಜೊತೆಗೆ ಶಾಲಾ ಸಂಕೇತ ಸಹ ರದ್ದಾಗಲಿದೆ