ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಕುಟುಂಬದವರು ಬಂಧನವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಟೆಕಿ ತಂದೆ ಪವನ್ ಕುಮಾರ್ ಮೋದಿ, ‘ಅತುಲ್ ಅವರ 4 ವರ್ಷದ ಮಗ ಎಲ್ಲಿದ್ದಾನೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮೊಮ್ಮಗ ಸತ್ತಿದ್ದಾನೋ? ಬದುಕಿದ್ದಾನೋ ಎಂದು ಗೊತ್ತಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ನೂತನ ಉತ್ತರಾಧಿಕಾರಿಯಾಗುತ್ತಿರುವ ಡಾ। ಎಚ್.ಎಲ್.ನಾಗರಾಜ ಅವರಿಗೆ ಪೋಷಕರಿಂದ ರಕ್ತ ಸಂಬಂಧದ ತ್ಯಾಗಕ್ಕೆ ಸಂಬಂಧಿಸಿದ ವಿಧಿ-ವಿಧಾನಗಳು ಶನಿವಾರ ರಾತ್ರಿ ನಡೆದವು.
ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.