ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಏರ್ಪಡಿಸಿದ್ದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆ ಸಿರವಾರ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್‌ಕುಮಾರ್ ಕೆ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತು ಮಾಡಿದೆ.
ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ, ಕಸ ವಿಲೇವಾರಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಸ್ವಂತ ಖರ್ಚಿನಲ್ಲಿ 13 ರಿಂದ 15 ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆ ಕುರಿತು ಸರ್ಕಾರದ ಮಂದೆ ಪ್ರಸ್ತಾಪ ಇಟ್ಟಿದ್ದಾರೆ
ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರು ಬೃಹಸ್ಪತಿಗಳೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷರು ದುರುದ್ದೇಶಪೂರ್ವಕವಾಗಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಯಾರೋ ಇದನ್ನು ಅವರ ಬಳಿ ಹೇಳಿಸುತ್ತಿದ್ದಾರೆ. ಅವರ ಆರೋಪ ಸತ್ಯವಾಗಿದ್ದರೆ, ಅವರಿಗೆ ಕೋರ್ಟ್‌ಗೆ ಹೋಗುವುದಕ್ಕೆ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಾಕಿ ಬಿಲ್ ಪಾವತಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ನೀಡಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಇನ್ನೊಂದು ತಿಂಗಳಲ್ಲಿ ಬಾಕಿ ಬಿಲ್ ಮೊತ್ತ ಪಾವತಿ ಮಾಡದಿದ್ದರೆ ಈ ಸರ್ಕಾರದಲ್ಲಿ ನಡೆದಿರುವ ಕಮಿಷನ್ ದಂಧೆ ವಿಚಾರ ಬಹಿರಂಗಪಡಿಸುವುದಾಗಿಯೂ ಎಚ್ಚರಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ವಿಸ್ತೀರ್ಣದಲ್ಲಿ ಬರೋಬ್ಬರಿ 2,350 ಕೋಟಿ ರು. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.17ರಿಂದ ಹೆಚ್ಚಲಿರುವ ಪ್ರಯಾಣಿಕರ ಒತ್ತಡ ನಿವಾರಣೆಗಾಗಿ ಕೆಎಸ್ಸಾರ್ಟಿಸಿ ಜತೆಗೆ ಬಿಎಂಟಿಸಿಯಿಂದ 960 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥ ಮಾಡಲಾಗುತ್ತಿದೆ. ಗೊತ್ತಿದ್ದು ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರುವ ಅಹಂಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.