ಕೇಂದ್ರ ಸಚಿವ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತದೇವನಹಳ್ಳಿ: ಕೇಂದ್ರ ಸಚಿವ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಅಲ್ಲದೆ ಕೋಲಾರ ಜಿಲ್ಲೆಗಳಿಂದ ಸಹಸ್ರಾರು ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಆಗಮಿಸಿ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಿ ಅಭಿನಂದಿಸಿದರು.