ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ನಾನಾ ಕಾರಣಗಳಿಂದಾಗಿ ಎರಡು ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಆದೇಶ ಹೊರಡಿರುವುದನ್ನು ಆಕ್ಷೇಪಿಸಿರುವ ಹೈಕೋರ್ಟ್
ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗದ 16 ನಿಲ್ದಾಣಗಳ ಪೈಕಿ 13ರಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದೆ.
ತನ್ನ ಅಂತಸ್ತಿಗೆ ತಕ್ಕಂತೆ ಆರತಕ್ಷತೆ ಮಾಡಿಕೊಡದಕ್ಕೆ ಗಂಡನ ಮೇಲೆ ಮುನಿಸಿಕೊಂಡು ಮದುವೆಯಾಗಿ ಏಳು ವರ್ಷ ಕಳೆದರೂ ಮೊದಲ ರಾತ್ರಿಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ ಮಂಜೂರಾತಿಯನ್ನು ಕಾಯಂಗೊಳಿಸಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ವಾರಸುದಾರರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಕೈಬಿಡಬೇಕಂದು ಆಗ್ರಹಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಹೋರಾಟ ತೀವ್ರವಾಗಿದ್ದು, ಭಾನುವಾರ ಗೃಹ ಸಚಿವ ಜಿ. ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ ನಡೆಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಗೆ ಶೇ.52.3ರಷ್ಟು ಹಾಜರಾತಿ ಇತ್ತು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.