ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯದಿಂದ ಜನರ ಜೀವ ತೆಗೆಯುತ್ತಾರೆ. ಅವರ ನಿರ್ಲಕ್ಷ್ಯದಿಂದ ನಾಗರಿಕರು ಸತ್ತರೂ ಯಾವೊಬ್ಬ ಅಧಿಕಾರಿಯೂ ಹೊಣೆ ಹೊತ್ತುಕೊಳ್ಳುವುದಿಲ್ಲ.
ರಾಜ್ಯದಲ್ಲಿ ಮುಂದಿನ ಮೂರು ದಿನ ಕರಾವಳಿಯ ಮೂರು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸರ್ವೀಸ್ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಜನಪ್ರಿಯ ವಿದೂಷಕ ಕುನಾಲ್ ಕಮ್ರಾ ಮತ್ತು ಓಲಾ ಕಂಪನಿ ಮಾಲೀಕ ಭವೀಶ್ ಅಗರ್‌ವಾಲ್ ನಡುವೆ ವಾಕ್ಸಮರ ನಡೆದಿದೆ.
ಬಿಬಿಎಂಪಿ ಅಧಿಕಾರಿಗಳು ಡಾಂಬರ್ ತುಂಬಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಇದೀಗ ಮತ್ತೆ ನಗರದಲ್ಲಿ ಮಳೆ ಆರಂಭಗೊಂಡಿರುವುದರಿಂದ ಮುಚ್ಚಿರುವ ಗುಂಡಿಗಳು ಮತ್ತೆ ಬಾಯ್ದೆರೆಯುತ್ತಿವೆ.
ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.
ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.