ಪ್ರತಿಷ್ಠಿತ ಶಾಲೆಗಳಿಗೆ 49 ವಿದ್ಯಾರ್ಥಿಗಳು ಆಯ್ಕೆ: ಎಡಿಸಿದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 49 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.