ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹದಾಬಸ್ಪೇಟೆ: ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.