ಆತ್ಮಹತ್ಯೆಗೆ ಶರಣಾದವರು ಬರೆದಿಟ್ಟ ಡೆತ್‌ನೋಟ್‌ನಲ್ಲಿ ಹೆಸರು ಉಲ್ಲೇಖಿಸಿರುವುದೊಂದೇ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಅಪರಾಧ ಸಾಬೀತಿಗೆ ಸಾಕಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಯಾದಗಿರಿ, ಕಲಬುರಗಿ ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಸೆಕ್ಯುರಿಟಿ ಏಜೆನ್ಸಿ ಮೂಲಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೀಗ ಮತ್ತೆ ಸೆಕ್ಯುರಿಟಿ ಏಜೆನ್ಸಿ ಮೂಲಕವೇ ಶಿಕ್ಷಕರನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ತೀವ್ರ ವಿರೋಧಕ್ಕೆ ಎಡೆ ಮಾಡಿಕೊಟ್ಟಿದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.