ತಂಬಾಕು ದುಷ್ಪರಿಣಾಮಗಳ ಜಾಗೃತಿ ಮೂಡಿಸಿ: ಡಿಸಿದೊಡ್ಡಬಳ್ಳಾಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ, ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಜನಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಕಾರ್ಯ ಪ್ರವೃತ್ತರಾಗುವಂತೆ ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.