ಮಂಗಳವಾರ ಮುಷ್ಕರದ ಹಿನ್ನೆಲೆಯಲ್ಲಿ ನಾಲ್ಕೂ ನಿಗಮಗಳ ದೈನಂದಿನ ಪ್ರಯಾಣಿಕರು ಮತ್ತು ಆದಾಯದಲ್ಲಿ 12 ಕೋಟಿ ರು.ನಷ್ಟು ಕುಸಿತವಾಗಿದೆ. ನಾಲ್ಕೂ ನಿಗಮಗಳ ಬಸ್‌ಗಳಿಂದ ಪ್ರತಿದಿನ ಸರಾಸರಿ 1.10 ಕೋಟಿ ಜನ ಪ್ರಯಾಣಿಸುತ್ತಿದ್ದು, 34 ಕೋಟಿ ರು. ಆದಾಯ ಬರುತ್ತಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ.
ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕನನ್ನು ಬುಧವಾರ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 5ಕ್ಕೇರಿದೆ.
ನಗರದ ವಿಕ್ಟೊರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿ ರೋಗಿಗಳಿಂದ ವೈದ್ಯರ ಕುರಿತು ಪ್ರತಿಕ್ರಿಯೆ ಪಡೆದರು. ಅಲ್ಲದೆ, ಆಸ್ಪತ್ರೆಯಲ್ಲಿ ನೀಡಲಾಗುವ ಊಟವನ್ನೂ ಪರೀಕ್ಷಿಸಿದರು.
ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ.
ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್ ರೈಸ್ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ.
ಹೆಬ್ಬಾಳ ಮೇಲ್ಸೇತುವೆ ಪರಿಶೀಲನೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಲಾಯಿಸಿದ್ದ ಸ್ಕೂಟರ್ ಮಾಲಿಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ ₹18,500 ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ.
ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು.
ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ.