ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಸರ್ಕಾರ ತಾಕೀತು ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಜ್ಯ ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ಉಮೇದುವಾರಿಕೆ ಸಲ್ಲಿಕೆಯಾಗಿವೆ.
ಮಳೆ ಬೆನ್ನಲ್ಲೇ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಅಲ್ಲದೆ ಡೆಂಘೀ ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ
ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಎರಡು ವಾರದಲ್ಲಿ ಬರೋಬ್ಬರಿ 172ಕ್ಕೂ ಅಧಿಕ ಡೆಂಘೀ ಪ್ರಕರಣ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಹಾಗೂ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಆರೋಗ್ಯ ವಿಭಾಗದಿಂದ ನಗರದಲ್ಲಿ ಜಾಗೃತಿ ಅಭಿಯಾನ ಆರಂಭಿಸಲಾಗಿದೆ.
ಸದ್ಯ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ನಗರವನ್ನು ಮುಂದಿನ ಎರಡು ವರ್ಷದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣ ನೀರು ಹೊಂದಿದ ನಗರವನ್ನಾಗಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.