ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆದೊಡ್ಡಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ.3 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 6ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ತಿಳಿಸಿದರು.