ಕೆಆರ್ ನಗರದ ಲೈಂಗಿಕ ಕಿರುಕುಳ ಸಂತ್ರಸ್ತೆಯೊಬ್ಬರ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಪತ್ನಿ ಭವಾನಿ ರೇವಣ್ಣನವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಫಲಿತಾಂಶ ಉತ್ತಮಗೊಳಿಸುವ ಮಹತ್ವಾಕಾಂಕ್ಷೆಯಿಂದ ಸರ್ಕಾರ ಇದೇ ಮೊದಲ ಬಾರಿಗೆ ಪರಿಚಯಿಸಿದ್ದ ವರ್ಷಕ್ಕೆ ಮೂರು ಪರೀಕ್ಷೆ ನಡೆಸುವ ಪ್ರಯೋಗವು ದ್ವಿತೀಯ ಪಿಯುಸಿಯಲ್ಲಿ ಅಲ್ಪ ಪ್ರಮಾಣದಲ್ಲಿ ಯಶಸ್ವಿಯಾದರೆ, ಎಸ್ಸೆಸ್ಸೆಲ್ಸಿಯಲ್ಲಿ ವಿಫಲವಾಗಿದೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.