ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.
ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ರೈಲು ಕಾರ್ಯಾಚರಣೆ ಹೊರತುಪಡಿಸಿ ಇನ್ನಿತರ ಮೂಲಗಳಿಂದ ಆದಾಯ ಗಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ನಿಲ್ದಾಣಗಳಿಗೆ ಕಡಿಮೆ ಅವಧಿಗೆ ಕಾರ್ಪೋರೆಟ್ ಕಂಪನಿಗಳ ನಾಮಕರಣ ಮಾಡುವ ಸಂಬಂಧ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆಸಿದೆ.
ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ.
ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣ ಎಲ್ಲ ತರಕಾರಿಗಳ ಬೆಲೆ ಹೆಚ್ಚಿದ್ದು, ಅದರಲ್ಲೂ ಬೀನ್ಸ್ ಬೆಲೆ ಬರೋಬ್ಬರಿ ₹200 ಗಡಿ ದಾಟಿದ್ದು ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ.
ಪ್ರತೇಕವಾಗುತ್ತಿರುವುದಕ್ಕೆ ಸಿಟ್ಟಾಗಿ ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.