ವಿಭೂತಿಕೆರೆ ಗ್ರಾಪಂ ಅಧ್ಯಕ್ಷೆ ಸುನೀತಾ ಅಧಿಕಾರ ಸ್ವೀಕಾರರಾಮನಗರದ ವಿಭೂತಿಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಕಳೆದ ವರ್ಷ ನಡೆದಿದ್ದ ಚುನಾವಣೆ ಫಲಿತಾಂಶವನ್ನು ಅಸಿಂಧುಗೊಳಿಸಿ, ಲಾಟರಿಯಲ್ಲಿ ಪರಾಭವಗೊಂಡಿದ್ದರು ಎನ್ನಲಾದ ಅಭ್ಯರ್ಥಿಯನ್ನೇ ವಿಜೇತ ಎಂದು ಘೋಷಿಸಿ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜೆಡಿಎಸ್ ಬೆಂಬಲಿತ ಸುನೀತಾ ನಾಗರಾಜ್‌ಸಿಂಗ್ ಗ್ರಾಪಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.