ರಾತ್ರಿ ವೇಳೆ ಉದ್ಯೋಗ ಮಾಡುವವರು, ಸಂಚರಿಸುವವರು ಇರುವುದರಿಂದ ಪಬ್ ತಡರಾತ್ರಿವರೆಗೆ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಗೃಹ ಸಚಿವರು ಹಾಗೂ ಅಬಕಾರಿ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು
ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.
ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.
ರಾಜ್ಯದಲ್ಲಿ ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆಗೂ ಮೊದಲೇ ಕೆಪಿಟಿಸಿಎಲ್, ಎಸ್ಕಾಂಗಳ ನೌಕರರ ಪಿಂಚಣಿ, ಗ್ರ್ಯಾಚುಟಿ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವ ಮೂಲಕ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಹೊಸ ಶಾಕ್ ನೀಡಿದೆ.
ಬೃಹತ್ ಹನಿಟ್ರ್ಯಾಪ್ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್ಡ್ರೈವ್ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.
ರಾಜ್ಯ ಆರ್ಥಿಕ ಸಂಕಟ ಎದುರಿಸುತ್ತಿದ್ದರೂ ಸಿಎಂ, ಸಚಿವರು, ವಿಧಾನಮಂಡಲ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ‘ಕರ್ನಾಟಕ ಶಾಸಕಾಂಗದ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ವಿಧೇಯಕ-2025’ಕ್ಕೆ ರಾಜ್ಯಪಾಲರು ಒಪ್ಪಿಗೆ