77ನೇ ಸ್ವಾತಂತ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯದಿಂದ 6 ಪಿಯುಸಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಗುರುವಾರ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಆಂಧ್ರಪ್ರದೇಶದಲ್ಲಿ ಕಾಡಾನೆ ಮತ್ತು ಮಾವನ ಸಂಘರ್ಷ ನಿಯಂತ್ರಣಕ್ಕೆ 8 ಕುಮ್ಕಿ (ಪಳಗಿಸಿದ) ಆನೆಗಳಿಗೆ ಬೇಡಿಕೆ ಸಲ್ಲಿಸಿದರು
ಶಾಲಾ ಮಾನ್ಯತೆ ನವೀಕರಣಕ್ಕಿರುವ ಕಠಿಣ ಮಾನದಂಡಗಳು, ಅಧಿಕಾರಿಗಳ ದೌರ್ಜನ್ಯ, ಲಂಚ ಬೇಡಿಕೆಯಿಂದ ಶಾಲೆಗಳನ್ನು ನಡೆಸುವುದು ಕಷ್ಟವಾಗಿದ್ದು, ಈ ಸಮಸ್ಯೆಯನ್ನು ಗಮನಕ್ಕೆ ತಂದರೂ ಸರ್ಕಾರ ಪರಿಹರಿಸದೇ ಇರುವುದನ್ನು ಖಂಡಿಸಿ, ವಿವಿಧ ಖಾಸಗಿ ಶಾಲಾ ಸಂಘಟನೆಗಳು ಆ. 15ರಂದು ಕರಾಳ ದಿನ ಆಚರಣೆಗೆ ತೀರ್ಮಾನಿಸಿವೆ.
ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಅಸಂವಿಧಾನಿಕವೆಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನೂತನವಾಗಿ ಕಟ್ಟಲಾಗಿದ್ದ ಸರ್ಕಾರಿ ಶಾಲೆಯ ಕಿಟಕಿ, ಸಿಸಿ ಕ್ಯಾಮೆರಾ, ಬಾಗಿಲು ಒಡೆದು ಶಾಲೆ ಕೊಠಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ದಾಂಧಲೆ ನಡೆಸಿ ಹೋಗಿರುವ ಘಟನೆ ದಾಸರಹಳ್ಳಿ ಕ್ಷೇತ್ರದ ಕ್ಷೇತ್ರದ ಮಲ್ಲಸಂದ್ರ ವಾರ್ಡ್‌ನ ರವೀಂದ್ರನಗರದಲ್ಲಿ ನಡೆದಿದೆ.