ಎರಡು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಜಾರಿವಿಜಯಪುರ: ಹತ್ತು ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೆ ಬಂದಿದ್ದ ಎತ್ತಿನ ಹೊಳೆ ಯೋಜನೆಗೆ ಅನುಮತಿ ದೊರೆಯದೆ ನನೆಗುದಿಗೆ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎರಡು ವರ್ಷದಲ್ಲಿ 100ಕ್ಕೆ 100ರಷ್ಟು ಗ್ಯಾರಂಟಿ ಎತ್ತಿನ ಹೊಳೆ ಯೋಜನೆ ಜಾರಿಗೆ ತಂದು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎಂದು ಎತ್ತಿನ ಹೊಳೆ ನೀರು ಹರಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಹೇಳಿದರು.