ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಸೋಮವಾರ ಭೇಟಿಯಾಗಿ ಕೊಲ್ಲೂರು ಮೂಕಾಂಬಿಕೆಯ ಪ್ರಸಾದ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು
ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ - ಮಹಾಲೆಕ್ಕಪರಿಶೋಧಕರು
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ (ಗ್ರೂಪ್-ಎ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಈಗಾಗಲೇ ಎರಡು ಬಾರಿ ಮರುನಿಗದಿ ಮಾಡಿರುವ ಕಾರಣ, ಮತ್ತೆ ದಿನಾಂಕ ಬದಲಾವಣೆ ಮಾಡದೆ ನಿಗದಿಯಂತೆ ಆ.25ರಂದು ಪರೀಕ್ಷೆ ನಡೆಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.
ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿನ ಶೇ.20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10 ಸಾವಿರ ರು. ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರು.ನಿಂದ 1.40 ಲಕ್ಷ ರು.ವರೆಗೆ ಶುಲ್ಕ ನಿಗದಿ