ಶಿಥಿಲ ಕಟ್ಟಡದಲ್ಲಿ ಐಸ್ ಕ್ರೀಂ ತಯಾರಿ: ಪಾಲಿಕೆಗೆ ನೋಟಿಸ್ನಗರದ ಶೇಷಾದ್ರಿಪುರದ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.