ಬಿಜೆಪಿ ಸದಸ್ಯರ ಆಕ್ಷೇಪ ಹಾಗೂ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುತ್ತಿರುವ ವಕ್ಫ್ ತಿದ್ದುಪಡಿ ಮಸೂದೆ-2024 ಅನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕೇಂದ್ರವನ್ನು ಆಗ್ರಹಿಸಲು ವಿಧಾನಸಭೆ ಬುಧವಾರ ನಿರ್ಣಯ ತೆಗೆದುಕೊಂಡಿದೆ.
ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಲ್ಲೇಶ್ವರದ ಸ್ಯಾಂಕಿ ಕೆರೆಯ ಆವರಣದಲ್ಲಿ ಮಾ.21ಕ್ಕೆ ಬೆಂಗಳೂರು ಜಲಮಂಡಳಿಯೂ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದಿಂದ ಕೆರೆಯ ಜೀವವೈವಿಧ್ಯಕ್ಕೆ ಹಾನಿ ಉಂಟಾಗಲಿದೆ ಎಂದು ಆರೋಪಿಸಿರುವ ಪರಿಸರ ಪ್ರೇಮಿಗಳು ಕಾರ್ಯುಕ್ರಮ ಕೈ ಬಿಡುವಂತೆ ಆಗ್ರಹಿಸಿದ್ದಾರೆ.
ಬಿಸಿಲು ಹೆಚ್ಚುತ್ತಿದ್ದಂತೆ ನಗರದಲ್ಲಿ ತಲೆನೋವು, ಜ್ವರ, ವಾಂತಿಬೇದಿಯಂತ ಅನಾರೋಗ್ಯ ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
6ರಿಂದ 8ನೇ ತರಗತಿ ಬೋಧನೆಯ ಪದವೀಧರ ಶಿಕ್ಷಕ ವೃಂದಕ್ಕೆ ಬಡ್ತಿ ನೀಡುವ ಸಂಬಂಧ 2017ರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ (ಸಿಅಂಡ್ ಆರ್) ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.