ರಾಮನಗರ ಕರಗ ಉತ್ಸವ: ಹಾಡು ಆಲಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ರಂಜಿಸಿತು. ಆಗಾಗೆ ಜಿನುಗುತ್ತಿದ್ದ ತುಂತುರು ಮಳೆಯ ನಡುವೆಯೂ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ವಾದ್ಯಗೋಷ್ಠಿ, ಗಾಯನ, ನೃತ್ಯ ಕಾರ್ಯಕ್ರಮಗಳು ತಡ ರಾತ್ರಿವರೆಗೂ ಜರುಗಿದವು.