ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್ ಆ್ಯಂಡ್ ಟಿ ಕಂಪನಿ ರದ್ದುಪಡಿಸಿದೆ.
ಜೀವನ ಪರ್ಯಂತ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಭಾನುವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಕೈದಿ ಸಂಖ್ಯೆ 15528 ನೀಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೃಷ್ಣರಾಜಸಾಗರ ಜಲಾಶಯ (ಕನ್ನಂಬಾಡಿ)ಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ಶನಿವಾರ ನಡೆದ ಸಾರಿಗೆ ನೌಕರ ಸಂಘಟನೆಗಳ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವಿನ ರಾಜೀ ಸಂಧಾನ ಸಭೆ ವಿಫಲವಾಗಿದೆ.
ರಾಜಧಾನಿ ಬೆಂಗಳೂರಿನ ಸುಮಾರು 1,500 ಕಿ.ಮೀ ಉದ್ದದ 654 ಆರ್ಟಿರಿಯಲ್ ರಸ್ತೆ, ಸಬ್ ಆರ್ಟಿರಿಯಲ್ ರಸ್ತೆ, ಜಂಕ್ಷನ್, ವೃತ್ತ ಸೇರಿದಂತೆ ಬಹುತೇಕ ನಗರದ ಎಲ್ಲೆಡೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಅವಕಾಶ
ನಗರದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಬಿಎಂಪಿಯ 75 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಒಂದೇ ಸೂರಿನಡಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು
ಸೂಕ್ತ ಸಮಯಕ್ಕೆ ಯುವಕನಿಗೆ ಅಂಗಾಂಗ ಕಸಿ ನೆರವೇರಿಸಲು ನಗರದ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಮೆಟ್ರೋ ರೈಲಿನ ಮೂಲಕ ಯಕೃತ್ತು ಸಾಗಾಟ ಮಾಡಲಾಗಿದೆ