ಚಳವಳಿಗಳ ದಿಕ್ಕುದೆಸೆ ಆತ್ಮಾವಲೋಕನ ಅಗತ್ಯದೊಡ್ಡಬಳ್ಳಾಪುರ: ಚಳವಳಿಗಳ ದಿಕ್ಕುದೆಸೆಗಳ ಕುರಿತು ಆತ್ಮಾವಲೋಕನ ಅಗತ್ಯವಾಗಿದೆ. ದಲಿತ ಸಂಘಟನೆಗಳ ಹೋರಾಟಗಳು ನೆಲದ ಸಂವೇದನೆಯನ್ನು ಪ್ರಧಾನವಾಗಿ ಪರಿಗಣಿಸಿ, ಸ್ವಾಭಿಮಾನದ ಸಂಕೇತಗಳಾಗಿ ರೂಪುಗೊಳ್ಳಬೇಕು ಎಂದು ದಲಿತ ವಿಮೋಚನಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಮಾ.ಮುನಿರಾಜು ಹೇಳಿದರು.