ಪ್ರಖರ ಬೆಳಕು ಸೂಸುವ ಎಲ್‌ಇಡಿ ಹೆಡ್‌ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ರಾಜ್ಯ ಪೊಲೀಸರು, ಕಳೆದ ಒಂದು ವಾರದಲ್ಲಿ 8,244 ಪ್ರಕರಣ ದಾಖಲಿಸಿದ್ದಾರೆ
ಜೂನ್ ತಿಂಗಳಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಜುಲೈನಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದೆ. ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಮಾಹಿತಿ ಪ್ರಕಾರ, ಈ ಬಾರಿ ವಾಡಿಕೆಗಿಂತ ಶೇ. 8ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮುಂಗಾರು ಸುರಿದಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆ ಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ.
‘ಜಿಲ್ಲಾಧಿಕಾರಿಗಳಿಗೆ ನಾವೇ ಮಹಾರಾಜರು ಎನ್ನುವ ಭಾವನೆ ಬೇಡ. ರಾಜಕಾರಣಿ ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎಂಬುದನ್ನು ಅರಿತು ಜನರ ಸಮಸ್ಯೆ ಪರಿಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.