ಭಾರೀ ಮಳೆಗೆ ಕಂಗೆಟ್ಟ ಮಲೆನಾಡು, ಕರಾವಳಿ!ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ. ಉತ್ತರ ಕನ್ನಡದಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರೆ, ಕೃತಕ ಪ್ರವಾಹದಿಂದಾಗಿ ಉಡುಪಿ ನಗರದ 110ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಸ್ಥಳದ 100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳ ಹಾಗೂ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.