ಲೋಕಸಭೆಗೆ ಸಿದ್ಧತೆ ಶುರು; ಗ್ರಾಮಾಂತರ ಮುಖಂಡರ ಜೊತೆ ಕುಮಾರಸ್ವಾಮಿ ಸಭೆಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.