ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ
ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ಅಕ್ಕಪಕ್ಕದ ಹಲವು ಜಿಲ್ಲೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಈರುಳ್ಳಿ ಆವಕವಾಗಿತ್ತು.
ಪೊಲೀಸ್ ಮತ್ತು ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಲು ಎಂಎಸ್‌ಐಎಲ್‌ನಿಂದ ಸೂಪರ್ ಮಾರ್ಕೆಟ್ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಮತ್ತೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದ್ದು, ಇವುಗಳಲ್ಲಿ 500 ಶಾಲೆಗಳಿಗೆ ಬುಧವಾರ ಪಟ್ಟಿ ಸಹಿತ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಪ್ರಸಕ್ತ 2025-26ನೇ ಸಾಲಿನಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತೇರ್ಗಡೆ ಅಂಕಗಳನ್ನು ತಗ್ಗಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಈ ಮುಂಚಿನ ಶೇ.35ರ ಬದಲು ಒಟ್ಟಾರೆ ಶೇ.33ರಷ್ಟು ಅಂಕಗಳನ್ನು ಪಡೆದರೆ ಉತ್ತೀರ್ಣರಾಗಲಿದ್ದಾರೆ.
ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.