ಇತ್ತೀಚೆಗೆ ವಿದ್ಯಾರ್ಥಿನಿಯರ ಕೊಲೆ ಕೃತ್ಯಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ಸೇರಿದಂತೆ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಸತ್ಯಾಸತ್ಯತೆ ಅರಿಯುವ ಸಲುವಾಗಿ ಕಳೆದ 10 ವರ್ಷಗಳಲ್ಲಿ ನಿಗಮದ ಅನುದಾನ ಬಳಕೆ ಕುರಿತಂತೆ ಮಾಹಿತಿ ನೀಡುವಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಸೂಚಿಸಿದ್ದಾರೆ.
ಕ್ಯಾಸಿನೋದಂತಹ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಸಲಹೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು ಉಪನಗರ ರೈಲ್ವೇ ಯೋಜನೆಯ ಬೈಯಪ್ಪನಹಳ್ಳಿ- ಚಿಕ್ಕಬಾಣಾವರ ಸಂಪರ್ಕಿಸುವ ‘ಮಲ್ಲಿಗೆ’ ಮಾರ್ಗದಲ್ಲಿ 12 ನಿಲ್ದಾಣಗಳ ಕಾಮಗಾರಿಗೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಮುಂದಾಗಿದೆ.