ಕೇಜ್ರಿವಾಲ್ ಮೇಲೆ ದೌರ್ಜನ್ಯ: ಎಎಪಿ ಧರಣಿಕೇಂದ್ರ ಸರ್ಕಾರವು ಇಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.