ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ; ವೇತನ, ಸೌಲಭ್ಯಕ್ಕಾಗಿ ಹೋರಾಟಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ.