ಡಿ.ಕೆ.ಶಿವಕುಮಾರ್ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್ನಲ್ಲಿ ನಡೆಯಿತು.
ನಿತ್ಯ ಬೆಂಗಳೂರು, ಸುತ್ತ ಮುತ್ತ ಸುಮಾರು 1000 ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದ್ದು, ಸಾವಿರಾರು ಅಡಿ ಆಳಕ್ಕೆ ಕೊರೆದು ಎತ್ತುವ ನೀರು ಬಳಕೆ ಮಾಡುವುದರಿಂದ ಆರೋಗ್ಯಕ್ಕೆ ಅಪಾಯವಾಗುವ ಜೊತೆಗೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತದೆ
ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
ನೆಲಮಂಗಲ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಭೂಸ್ವಾಧೀನ ಮಾಡುವಂತಹ ಕ್ರಮಗಳನ್ನು ಕೈಗೊಳ್ಳದಂತೆ ಶಾಸಕ ಎನ್. ಶ್ರೀನಿವಾಸ್ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಲ್ಲಿ ಮನವಿ
‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.
ಮೆಟ್ರೋ, ಬಸ್ ಪ್ರಯಾಣ ಟಿಕೆಟ್ ದರ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಏಪ್ರಿಲ್ನಿಂದ ಮತ್ತೊಂದು ಹೊರೆ ಹೇರುವುದಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ಏಪ್ರಿಲ್ನಿಂದ ಮನೆ-ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದಕ್ಕೆ ಶುಲ್ಕ ವಸೂಲಿ ಜಾರಿಗೊಳಿಸಲು ನಿರ್ಧರಿಸಿದೆ.
ನೀರಿನ ದರ ಪರಿಷ್ಕರಣೆಗೆ ಬೆಂಗಳೂರು ಜಲ ಮಂಡಳಿಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದೆ. ಆದರೆ, ಅಷ್ಟು ಬೇಡ ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡುವ ಚಿಂತನೆಯಿದೆ. ಶೀಘ್ರ ನಗರದ ಶಾಸಕರ ಬಳಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು, ಸದಸ್ಯರ ಆಯ್ಕೆ ಹಾಗೂ ಕೆಪಿಎಸ್ಸಿಗೆ ಸುಧಾರಣೆ ತರುವ ಕುರಿತು ಶಿಫಾರಸು ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನೊಳಗೊಂಡ ಶೋಧನಾ ಸಮಿತಿ ರಚಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಇ-ಸ್ವತ್ತಿನಿಂದ ಹೊರಗುಳಿದಿರುವ 96 ಲಕ್ಷ ಅನಧಿಕೃತ ಆಸ್ತಿಗಳ ಮೇಲೆ ಶುಲ್ಕ ಅಥವಾ ದಂಡ ವಿಧಿಸಿ ಇ-ಖಾತಾ ವ್ಯವಸ್ಥೆಯಡಿ ತರುವ ಸಲುವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ 199-ಬಿ ಹಾಗೂ 199-ಸಿ ಸೇರ್ಪಡೆ ಮಾಡಲು ಅನುಮೋದನೆ ನೀಡಲಾಗಿದೆ.
‘ನಾನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಪಾಲ್ಗೊಂಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಕಾರಾಗೃಹದ ಅಧಿಕಾರಿಗಳಿಗೆ ನಟಿ ರನ್ಯಾ ರಾವ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.