ಸಿದ್ದು ಬಜೆಟ್: ಬಂಪರ್ ನಿರೀಕ್ಷೆಯಲ್ಲಿ ಬೆಂ.ಗ್ರಾ. ಜಿಲ್ಲೆದೊಡ್ಡಬಳ್ಳಾಪುರ: ರಾಜಧಾನಿಯ ಸೆರಗಿನಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಗಾರಿಕಾಭಿವೃದ್ದಿ, ನಗರೀಕರಣ ಮತ್ತು ಕೃಷಿ, ನೇಕಾರಿಕೆಯ ಅಸ್ಥಿರತೆಯ ನಡುವೆ ಸದಾ ಒಂದಿಲ್ಲೊಂದು ಸಮಸ್ಯೆಗಳನ್ನು ಎದುರಿಸುತ್ತಲೇ ಬರುತ್ತಿದೆ. ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ಗ್ರಾಮಾಂತರ ಜಿಲ್ಲೆಗೆ ಅಗತ್ಯ ಮೂಲಸೌಕರ್ಯಗಳನ್ನು ಹೊಂದುವುದು ಸವಾಲಿನ ಕೆಲಸವಾಗಿದ್ದು, ಇಂದು ಮಂಡನೆಯಾಗಲಿರುವ 2023-24ನೇ ಸಾಲಿನ ಬಜೆಟ್ನಲ್ಲಿ ಮಹತ್ತರ ಯೋಜನೆಗಳನ್ನು ಎದುರು ನೋಡುತ್ತಿದೆ.