ಬೆಂಗಳೂರಿಗೆ ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು: ಡಿಕೆಶಿಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದ್ದು, ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕಾಗಿದೆ ಎಂದರು.