ಸ್ವಚ್ಛತೆ ಕಾಪಾಡಿ ಡೆಂಘೀ ತಡೆಗಟ್ಟಲು ಸಹಕರಿಸಿದಾಬಸ್ಪೇಟೆ: ಡೆಂಘೀ ಜ್ವರ ಸೊಳ್ಳೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುವ ಸಾಧ್ಯತೆಗಳು ಹೆಚ್ಚು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಸತೀಶ್ ಸಲಹೆ ನೀಡಿದರು.