ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಸಂಚಾರ ದಟ್ಟಣೆ ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ 2025ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದರು.